ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..!
ಕೊಡಗು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲಿ ಟ್ವಿಟರ್ ಅಭಿಯಾನ ಆರಂಭವಾಗಿದೆ. ನಮ್ಮಲ್ಲಿ ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ನಮ್ಮ ಸರ್ಕಾರವು ಉತ್ಸುಕವಾಗಿದೆ. […]