kodagu

ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವ

ಕೊಡಗು: ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ತಲಕಾವೇರಿಯ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಪ್ರತ್ಯಕ್ಷವಾಗುತ್ತಾಳೆ. ಇಂದು ತಡರಾತ್ರಿ(ಅ.18) 12:59ಕ್ಕೆ ತೀರ್ಥೋದ್ಭವ ಆಗಲಿದ್ದು, ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿ ಹರಿಯಲಿದೆ. ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈ ವಿಸ್ಮಯ ನೋಡಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ನಾನಾ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಅರ್ಚಕರ ತಂಡ ಕೂಡ […]

ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವ Read More »

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಮತ್ತೆ ಭಾರಿ ಮಳೆ ಸುರಿಯುತ್ತಿದ್ದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆನೀಡಿದ್ದು, ಇದರ ಬೆನ್ನಲೆ ಕೊಡಗು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಬೆಳಗ್ಗೆಯಿಂದ ಬಿಟ್ಟು ಬಿಡದೆ ಕೊಡಗಿನ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮ ಮತ್ತೆ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಮಳೆಯಿಂದ ನಾಪೋಕ್ಲು ಭಾಗಮಂಡಲ ಮತ್ತು ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ರಸ್ತೆ ಮೇಲೆ 2 ಅಡಿ ನೀರು

ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ Read More »

ಕೊಡಗಿನಲ್ಲಿ ಭೂಕುಸಿತ; ಮೂವರು ಸಾವು, ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಹಾಮಳೆ ಮುಂದುವರೆದಿದ್ದು ಭೂ ಕುಸಿತಕ್ಕೆ ಮೂವರು ಬಲಿಯಾಗಿದ್ದಾರೆ. ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕೊರಂಗಾಲ ಬಳಿ ಈ ಘಟನೆ ನಡೆದಿದ್ದು ಭೂ ಕುಸಿತಕ್ಕೆ ಮೂವರು ಬಲಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಮತ್ತಿಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಕೇಂದ್ರ ಸಚಿವ ಸದಾನಂದಗೌಡ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಹಲವೆಡೆ ಮುಳುಗಡೆ ಪ್ರದೇಶದಲ್ಲಿ ಸಿಲುಕಿದ ಜನರನ್ನು NDRF ತಂಡ, ಕೊಡಗು ಪೋಲಿಸರಿಂದ ರಕ್ಷಣೆ ಮಾಡುತಿದ್ದಾರೆ. ಈಗಾಗಲೆ 20ಕ್ಕೂ ಹೆಚ್ಚು

ಕೊಡಗಿನಲ್ಲಿ ಭೂಕುಸಿತ; ಮೂವರು ಸಾವು, ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕೊಡಗಿನಲ್ಲಿ ಮತ್ತೆ ಧಾರಾಕಾರ ಮಳೆ: ‘ರೆಡ್‌ ಅಲರ್ಟ್‌’ ಘೋಷಣೆ

ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನಿರಂತರ ಮಳೆಯಿಂದಾಗಿ ಜನರು ಹೊರಗೆ ಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಗುಡ್ಡ ಕುಸಿದಿದೆ. ಮಾಕುಟ್ಟದಲ್ಲಿ ಸೇತುವೆ ಕುಸಿದ ಪರಿಣಾಮ ಕೇರಳ ಕೊಡಗು ಸಂಚಾರ ರದ್ದಾಗಿದೆ. ಭಾರೀ ಮಳೆಗೆ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಭಾಗಮಂಡಲ ನಾಪೋಕ್ಲು ರಸ್ತೆಗೆ ನೀರು ನುಗ್ಗಿದ್ದು, ನಾಪೋಕ್ಲು-ಭಾಗಮಂಡಲ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.

ಕೊಡಗಿನಲ್ಲಿ ಮತ್ತೆ ಧಾರಾಕಾರ ಮಳೆ: ‘ರೆಡ್‌ ಅಲರ್ಟ್‌’ ಘೋಷಣೆ Read More »

ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ

ಕೊಡಗು: ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜಿಲ್ಲೆಯಾದ್ಯಂತ 5 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅವಧಿಯಲ್ಲಿ 115.6 ರಿಂದ 204.4 ಮಿ.ಮೀ.ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಜಿಲ್ಲೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಆಪತ್ಕಾಲದಲ್ಲಿ ಸಂಪರ್ಕಿಸಲು ಜಿಲ್ಲಾಡಳಿತದ ಸಹಾಯ ವಾಣಿ ಸಂಖ್ಯೆಯನ್ನು ನೀಡಿದೆ.

ಕೊಡಗಿನಲ್ಲಿ ನಾಳೆಯಿಂದ 22ರವರೆಗೆ ಭಾರೀ ಮಳೆ ಸಾಧ್ಯತೆ: ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಮನವಿ Read More »

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..!

ಕೊಡಗು: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ. ನಮ್ಮಲ್ಲಿ ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ನಮ್ಮ ಸರ್ಕಾರವು ಉತ್ಸುಕವಾಗಿದೆ.

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..! Read More »

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿದಿದೆ. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ. ಮಳೆ ಆರಂಭಗೊಂಡ ಬೆನ್ನಲ್ಲೇ ಜನರು ಆತಂಕಗೊಂಡಿದ್ದಾರೆ. ಕಳೆದ ಬಾರಿ ಜಲ ಪ್ರಳಯಕ್ಕೆ ಜನರು ಬದುಕು ಮೂರಬಟ್ಟೆಯಾಗಿತ್ತು. ಭೂ ಕುಸಿತದಿಂದ ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು. ಇನ್ನೆರಡು ದಿನ ಜಿಲ್ಲೆಯಲ್ಲಿ

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ Read More »

Scroll to Top