ಮಹಾಮಸ್ತಕಾಭಿಷೇಕ

ಇಂದಿನಿಂದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ

ಬೆಳ್ತಂಗಡಿ: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ಮಹಾಮಸ್ತಕಾಭಿಷೇಕ ದ ಸಂಭ್ರಮ. ಮಹಾನ್ ವಿರಾಗಿ ಬಾಹುಬಲಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಜ್ಜನಕ್ಕೆ ಮಂಜುನಾಥನ ಕ್ಷೇತ್ರ ಸಜ್ಜಾಗಿದೆ. ಧರ್ಮಸ್ಥಳದ ರತ್ನಗಿರಿಯಲ್ಲಿ ಫೆ.9ರಿಂದ 18ರ ವರೆಗೆ ಸಂತ ಸಮ್ಮೇಳನ ಸೇರಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಾಹುಬಲಿಯ ಪ್ರತಿಷ್ಠಾಪಕರಾಗಿರುವ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆಯವರ ನೇತೃತ್ವದಲ್ಲಿ ಮಹಾಮಸ್ತಕಾಭಿಷೇಕದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾಮಜ್ಜನದ ಭಾಗವಾಗಿ ವಿವಿಧ ಜನಮಂಗಲ, ಜನಕಲ್ಯಾಣ ಕಾರ್ಯಕ್ರಮಗಳು ನಾಡಿಗೆ ಸಮರ್ಪಿತವಾಗಲಿವೆ. […]

ಇಂದಿನಿಂದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ Read More »