Pejawar sri

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ

ಉಡುಪಿ: ಶ್ವಾಸಕೋಶ ಉಸಿರಾಟ ಸಮಸ್ಯೆಯಿಂದ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ(88) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಪೇಜಾವರ ಮಠದಲ್ಲಿ ಶ್ರೀ ಕೃಷ್ಣನಲ್ಲಿ ಲೀನರಾದರು. ನ್ಯುಮೋನಿಯಾ (ಶ್ವಾಸಕೋಶ ಉಸಿರಾಟ ಸಮಸ್ಯೆ)ಯಿಂದಾಗಿ ಡಿ.20 ಶುಕ್ರವಾರ ಮುಂಜಾನೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ತಜ್ಞ ವೈದ್ಯರ ತಂಡ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತಿದ್ದರು. ಕಳೆದ ಎಂಟು ದಿನಗಳ ನಡುವೆ ಆರೋಗ್ಯ ತುಸು ಚೇತರಿಕೆ ಕಂಡಿದ್ದರೂ ಕೃತಕ ಉಸಿರಾಟ ಮೂಲಕ […]

ಪೇಜಾವರ ಮಠಾಧೀಶ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಲ್ಲಿ ವಿಲೀನ Read More »

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಶ್ರೀಗಳು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಶ್ರೀಗಳು ಉತ್ತರ ಭಾರತ, ತಿರುಪತಿ ಹಾಗೂ ಚೆನ್ನೈ ಪ್ರವಾಸದಲ್ಲಿದ್ದರು. ಗುರುವಾರ ರಾತ್ರಿ ಶೀತದಿಂದ ಬಳಲುತ್ತಿದ್ದ ಶ್ರೀಗಳಿಗೆ ಮುಂಜಾನೆ ತೀವ್ರವಾಗಿ ಉಸಿರಾಟದ ತೊಂದರೆ ಉಂಟಾಗಿದೆ.

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು Read More »

Scroll to Top