Sandalwood

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ..!

ಮೈಸೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಹೃದಯಾಘಾತವಾಗಿದೆ. ಮೈಸೂರಿನಲ್ಲಿರುವ ಅವರ ನಿವಾಸದಲ್ಲಿಯೇ ಘಟನೆ ಸಂಭವಿಸಿದ್ದು ಸದ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಬೋಗಾದಿ ರಸ್ತೆಯ ಬಳಿ ಅರ್ಜುನ್​ ಜನ್ಯ ಐಷಾರಾಮಿ ವಿಲ್ಲಾ ಒಂದನ್ನು ಖರೀದಿಸಿದ್ದರು. ಸಮಯ ಸಿಕ್ಕಾಗಲೆಲ್ಲ ಮೈಸೂರಿಗೆ ಬರುತ್ತಿದ್ದ ಜನ್ಯ ಅದೇ ವಿಲ್ಲಾದಲ್ಲಿ ಉಳಿದುಕೊಳ್ಳುತ್ತಿದ್ದರು. ನಿನ್ನೆ ಸಹ ಇದೇ ವಿಲ್ಲಾಕ್ಕೆ ಬಂದಿದ್ದು ತಡರಾತ್ರಿಯಲ್ಲಿ ಹೃದಯಾಘಾತವಾಗಿದೆ. ಅರ್ಜುನ್ ಅವರ ಆರೋಗ್ಯದ ಬಗ್ಗೆ ಅಪೋಲೋ ಹೃದ್ರೋಗ ತಜ್ಞ ಆದಿತ್ಯ ಉಡುಪ ಪ್ರತಿಕ್ರಿಯಿಸಿ, […]

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ..! Read More »

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: ಇಂದು ದೆಹಲಿಯಲ್ಲಿ 66ನೇಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆದಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ. 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾರಂಗ ಹನ್ನೊಂದು ಪ್ರಶಸ್ತಿಯನ್ನು ಗೆದ್ದುಗೊಂಡಿದೆ. ಸ್ಯಾಂಡಲ್ ವುಡ್ ನ ನಾತಿ ಚರಾಮಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಂಪ್ರದಾಯದ ಪ್ರಕಾರ ರಾಷ್ಟ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪ್ರದಾನ ಮಾಡಬೇಕಿತ್ತು. ಆದರೆ ಈ ಬಾರಿ ಕೋವಿಂದ್ ಅವರ ಅನುಪಸ್ಥಿತಿಯಲ್ಲಿ ಉಪರಾಷ್ಟ್ರಪತಿ ನಾಯ್ಡು ಪ್ರಶಸ್ತಿ ನೀಡಿದ್ದಾರೆ.

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ Read More »

ಹೊಸ ಪ್ರತಿಭೆಗಳ ‘ಲುಂಗಿ’ ಚಿತ್ರವನ್ನ ನೀವು ಒಮ್ಮೆ ನೋಡಲೇಬೇಕು..!

ಸಿನಿಮಾ: ಬಹುತೇಕ ಹೊಸ ಪ್ರತಿಭೆಗಳಿಂದ ಮೂಡಿಬಂದಿರುವ “ಲುಂಗಿ’ ಚಿತ್ರ ಈ ವಾರ ತೆರೆಗೆ ಬಂದಿದ್ದು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಿರ್ದೇಶಕರಾದ ಅರ್ಜುನ್‌ ಲೂವಿಸ್ ಮತ್ತು ಅಕ್ಷಿತ್ ಶೆಟ್ಟಿ ಚೊಚ್ಚಲ ಪ್ರಯತ್ನದಲ್ಲೇ ತುಂಬ ಸರಳವಾದ ಕಥೆಯನ್ನು ಆಯ್ದುಕೊಂಡಿದ್ದಾರೆ. ಅದನ್ನು ಅಷ್ಟೇ ಸರಳ, ಸುಂದರವಾಗಿ ತೆರೆಗೆ ತಂದಿದ್ದಾರೆ. ಚಿತ್ರಕಥೆಯಲ್ಲಿ ಗಮನಾರ್ಹವಾದ ತಿರುವುಗಳಿಲ್ಲ. ಆದರೆ, ನೋಡಿಸಿಕೊಂಡು ಹೋಗುವ ಗುಣ ಸಿನಿಮಾಕ್ಕಿದೆ. ಸಂಪೂರ್ಣ ಮಂಗಳೂರು ಕನ್ನಡವನ್ನೇ ಪ್ರಧಾನವಾಗಿರಿಸಿಕೊಂಡು ಬರೆದಿರುವ ಸಂಭಾಷಣೆ ‘ಲುಂಗಿ’ ಚಿತ್ರದ ಮತ್ತೊಂದು ಹೈಲೈಟ್‌. ಕಾಡು, ಮರಗಳ ನಡುವೆ ಅಲ್ಲಲ್ಲಿ

ಹೊಸ ಪ್ರತಿಭೆಗಳ ‘ಲುಂಗಿ’ ಚಿತ್ರವನ್ನ ನೀವು ಒಮ್ಮೆ ನೋಡಲೇಬೇಕು..! Read More »

ನಿಮ್ಮ ಹೃದಯಕ್ಕೆ ಹತ್ತಿರವಾಗಿವಾಗುವ ‘ಲುಂಗಿ’ ಚಿತ್ರದ ಈ ಮುದ್ದಾದ ಹಾಡು ಕೇಳಿ

ಸಿನಿಮಾ: ಇತ್ತೀಚಿನ ದಿನಗಳಲ್ಲಿ ಮಂಗಳೂರು ಮೂಲದ ಹಲವಾರು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಹವಣಿಸುತ್ತಿದ್ದಾರೆ. ಅಂಥಾ ಒಂದು ಹೊಸ ತಂಡ ಲುಂಗಿ ಎಂಬ ಚಿತ್ರ ತಂಡ. ಇಡೀ ಚಿತ್ರದಲ್ಲಿ ಮಂಗಳೂರು ಭಾಷೆ, ಸೊಗಡು ಮತ್ತು ಅಲ್ಲಿನ ಸಂಸ್ಕೃತಿ, ಆಚಾರ-ವಿಚಾರ ಇರುವಂತಹ ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಬಹುತೇಕ ಹೊಸಬರೇ ಸೇರಿ ಮಾಡಿರುವ “ಲುಂಗಿ’ ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲು ಅಣಿಯಾಗುತ್ತಿದೆ. ಇದೀಗ ಚಿತ್ರದ ಮುದ್ದಾದ ಹಾಡೊಂಡು ಬಿಡುಗಡೆಯಾಗಿದ್ದು ಅರ್ಮಾನ್ ಮಲ್ಲಿಕ್ ಕಂಠ ಸಿರಿಯಲ್ಲಿ ಮೂಡಿಬಂದಿರುವ ಹಾಡು

ನಿಮ್ಮ ಹೃದಯಕ್ಕೆ ಹತ್ತಿರವಾಗಿವಾಗುವ ‘ಲುಂಗಿ’ ಚಿತ್ರದ ಈ ಮುದ್ದಾದ ಹಾಡು ಕೇಳಿ Read More »

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು ಕನ್ನಡದ ನಾತಿಚರಾಮಿ ಚಿತ್ರ ಅತ್ಯುತ್ತಮ ಸೇರಿದಂತೆ 11 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ ಪ್ರಶಸ್ತಿ ಬಾಚಿಕೊಂಡಿದೆ. ಈ ಬಾರಿ ಒಟ್ಟು ಒಟ್ಟು 31 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಕನ್ನಡಕ್ಕೆ ಈ ಸಲ ಹಲವಾರು ಪ್ರಶಸ್ತಿಗಳು ಸಿಕ್ಕಿವೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಆಗಿ ಶ್ರುತಿ ಹರಿಹರನ್ ಅಭಿನಯದ ನಾಚಿಚರಾಮಿ ಹಾಗೂ ಅತ್ಯುತ್ತಮ ಆ್ಯಕ್ಷನ್ ಚಿತ್ರವಾಗಿ ಕೆಜಿಎಫ್ ಆಯ್ಕೆಯಾಗಿದೆ. ನಾತಿಚರಾಮಿಯ ಮಾಯಾವಿ ಮನವೆ ಗೀತೆಗೆ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ 11 ರಾಷ್ಟ್ರ ಪ್ರಶಸ್ತಿ Read More »

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..!

ಕೊಡಗು: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ. ನಮ್ಮಲ್ಲಿ ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ನಮ್ಮ ಸರ್ಕಾರವು ಉತ್ಸುಕವಾಗಿದೆ.

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..! Read More »

ಬಿಡುಗಡೆ​ಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..!

ಸಿನಿಮಾ: ಕನ್ನಡ ಚಿತ್ರವೊಂದು ಬಿಡುಗಡೆಗೆ ಮುನ್ನವೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಖತ್ ಸದ್ದು ಮಾಡಿದೆ. ‘ಗಂಧದ ಕುಡಿ’ ಹೆಸರಿನ ಈ ಸಿನಿಮಾ ಈಗ ಎಲ್ಲೆಡೆ ಹವಾ ಎಬ್ಬಿಸಿದ್ದು, ಈಗಾಗಲೇ 21 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಕನ್ನಡದಲ್ಲಿ ಅನೇಕ ಮಕ್ಕಳ ಸಿನಿಮಾಗಳು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅಂತಹ ಚಿತ್ರಗಳು ಅಪರೂಪ. ಅಲ್ಲೊಂದು ಇಲ್ಲೊಂದು ಮಕ್ಕಳ ಸಿನಿಮಾ ಬರುತ್ತೆ. ಇದೀಗ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ಚಿತ್ರ ಗಂಧದ ಕುಡಿ 21 ಪ್ರಶಸ್ತಿಗಳನ್ನು ಬಾಚಿಕೊಂಡು ಭಾರಿ ಸದ್ದು ಮಾಡುತ್ತಿದೆ. ಕರ್ನಾಟಕದ ಸಹ್ಯಾದ್ರಿ

ಬಿಡುಗಡೆ​ಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..! Read More »

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ

ಮೈಸೂರು: ಕನ್ನಡ ಚಲನಚಿತ್ರ ನಟರಾದ ಚಿಕ್ಕಣ್ಣ ಅವರು ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆಯುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಮೈಸೂರು ಮೃಗಾಲಯದಲ್ಲಿ 87,000ರೂ. ಪಾವತಿಸಿ ಪ್ರಾಣಿ ಪಕ್ಷಿಗಳನ್ನು ದತ್ತು ಸ್ವೀಕರಿಸಿದ್ದಾರೆ. ನಟ ಚಿಕ್ಕಣ್ಣ 35,000ರೂ, ಪಾವತಿಸಿ ಚಿರತೆಯನ್ನು, ಸಿದ್ದೇಗೌಡ 3,500ರೂ ಪಾವತಿಸಿ ಕಾಳಿಂಗಸರ್ಪವನ್ನು, ಎಂಮೋಹನ್ ಕುಮಾರ್ 17,500ರೂ ಪಾವತಿಸಿ 5 ಬಿಳಿಯನವಿಲುಗಳನ್ನು, ಡೆನ್ ತಿಮ್ಮಯ್ಯ 14,000ರೂ ಪಾವತಿಸಿ 4 ನವಿಲುಗಳನ್ನು, ಯಶಸ್ ಸೂರ್ಯ 13,500ರೂ ಪಾವತಿಸಿ ಕಾಳಿಂಗಸರ್ಪ ಮತ್ತು ಅನಕೊಂಡ

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ Read More »

ಒಂದು ಕಥೆ ಹೇಳ್ಲಾ

ಬಿಡುಗಡೆಯಾಯ್ತು ಐದು ಹಾರರ್ ಕಥೆಗಳ ಟ್ರೈಲರ್..!

ಬೆಂಗಳೂರು: ಜೋಡಿಹಕ್ಕಿ ಸೀರಿಯಲ್ ಮೂಲಕ ರಾಮಣ್ಣ ಎಂದೇ ಖ್ಯಾತರಾಗಿರುವವರು ತಾಂಡವ್. ಅವರೀಗ ಒಂದು ಕಥೆ ಹೇಳ್ಲಾ ಎಂಬ ವಿನೂತನ ಪ್ರಯೋಗದ ಹಾರರ್ ಚಿತ್ರವೊಂದರ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಹೊಸ ಥರದ ಪೋಸ್ಟರ್ ಸೇರಿದಂತೆ ನಾನಾ ರೀತಿಯಲ್ಲಿ ಈ ಸಿನಿಮಾ ಸುದ್ದಿ ಕೇಂದ್ರದಲ್ಲಿದೆ. ಇದೀಗ ಇದರ ಟ್ರೈಲರ್ ಹೊರ ಬಂದಿದೆ. ಇದುವೇ ಕ್ಷಣ ಕ್ಷಣವೂ ಬೆಚ್ಚಿ ಬೆರಗಾಗಿಸುವಂಥಾ ಡಿಫರೆಂಟಾದ ಕಂಟೆಂಟು ಈ ಚಿತ್ರದಲ್ಲಿದೆ ಎಂಬಂಥಾ ಸುಳಿವನ್ನೂ ಬಿಟ್ಟುಕೊಟ್ಟಿದೆ. ಕ್ರೌಡ್ ಫಂಡಿಂಗ್ ಮೂಲಕ ನಿರ್ಮಾಣಗೊಂಡಿರೋ ಈ ಚಿತ್ರವನ್ನು ಗಿರೀಶ್

ಬಿಡುಗಡೆಯಾಯ್ತು ಐದು ಹಾರರ್ ಕಥೆಗಳ ಟ್ರೈಲರ್..! Read More »

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಶಾಕ್ ನೀಡಿದೆ. ಕನ್ನಡದ ಸ್ಟಾರ್ ನಟರು ಸೇರಿದಂತೆ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಟ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ರಾಜ್‍ಕುಮಾರ್, ಶಿವರಾಜ್‍ಕುಮಾರ್, ಕಿಚ್ಚಾ ಸುದೀಪ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ Read More »

Scroll to Top