ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣ: ಬೀದಿಗಿಳಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ:- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಶವವಾಗಿ ಪತ್ತೆಯಾಗಿದ್ದಳು. ಅಂದು ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಎಂದು ದಾಖಲಾಗಿದ್ದ ಪ್ರಕರಣ ಈಗ ಟ್ವಿಸ್ಟ್ ಪಡೆದಿದ್ದು ಅತ್ಯಾಚಾರವೆಸಗಿ, ಕೊಲೆ ಎಂದು ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಮಧು ತಾಯಿ ರೇಣುಕಾದೇವಿ ನೀಡಿದ ದೂರಿನ ಮೇರೆಗೆ ಪೊಲೀಸರು […]