Yaduveer wodeyar

ಇಸ್ರೋ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಮಹಾರಾಜ ಯದುವೀರ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ (ಇಸ್ರೋ) ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಯದುವೀರ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಇಸ್ರೋದ ಅಧ್ಯಕ್ಷ ಕೆ. ಶಿವನ್ ಹಾಗು ಮತ್ತಿತರರು ಭಾಗವಹಿಸಿದ್ದರು.

ಇಸ್ರೋ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಮಹಾರಾಜ ಯದುವೀರ್ Read More »

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ತುಮಕೂರು: ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯದುವೀರ್​ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್​​, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದೆವು. ಹಾಗೇ ಶ್ರೀಗಳನ್ನ ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ, ಅವರು ಚೇತರಿಸಿಕೊಳ್ಳಲಿ ಎಂದು ತಾಯಿ ಚಾಮುಂಡೇಶ್ವಯಲ್ಲಿ ಪ್ರಾರ್ಥನೆ ಮಾಡುತ್ತೇನೆ

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್ Read More »

Scroll to Top